UDUPI
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರಿಗೆ ತರಬೇತಿ ಕಾರ್ಯಾಗಾರ
ಉಡುಪಿ, ಆಗಸ್ಟ್ 23: ಜಿಲ್ಲಾಡಳಿತ ಉಡುಪಿ, ಕಾರ್ಮಿಕ ಇಲಾಖೆ ಉಡುಪಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು ತರಬೇತಿ ಕಾರ್ಯಾಗಾರವನ್ನು ತಾಲೂಕು ಪಂಚಾಯತ್ ಅಧ್ಯಕ್ಷರಾದ ನಳಿನಿ ಪ್ರದೀಪ್ ರಾವ್ ರವರು ಉದ್ಘಾಟಿಸಿ ಕಾರ್ಯಾಗಾರಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಉಡುಪಿಯ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್, ಇವರು ವಹಿಸಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯ ಅನುಷ್ಠಾನದ ಬಗ್ಗೆ ಮಾತನಾಡಿದರು. ಅತಿಥಿಗಳಾಗಿ, ತಾಲೂಕು ಪಂಚಾಯತ್ ಉಪಾದ್ಯಕ್ಷರಾದ ಪಿ.ರಾಜೇಂದ್ರ, ಉಡುಪಿ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕರಾದ ಹರಿಕೃಷ್ಣ ಶಿವತ್ತಾಯ, ಉಡುಪಿ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ಸಂಜೀವ ಮರಕಾಲ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಬಿ.ಜಿ.ಶಂಕರಮೂರ್ತಿ, ಉಪನ್ಯಾಸಕರು, ವೈಕುಂಠ ಬಾಳಿಗಾ ಕಾಲೇಜ್ ಆಫ್ ಲಾ, ಉಡುಪಿ ರವರು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆಯ ಬಗ್ಗೆ ಉಪನ್ಯಾಸ ನೀಡಿದರು.