LATEST NEWS
ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ನಡೆದ ಧಾರುಣ ಘಟನೆ

ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ನಡೆದ ಧಾರುಣ ಘಟನೆ
ಮಂಗಳೂರು ನವೆಂಬರ್ 6: ನಗರದ ಡಾನ್ ಬಾಸ್ಕೊ ಹಾಲ್ ನಲ್ಲಿ ಆಯೋಜಿಸಲಾಗಿದ್ದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ದುರಂತ ಒಂದು ಸಂಭವಿಸಿದೆ. ಸ್ಪರ್ದೆಯ ಸಂದರ್ಭದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ದಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿ ವಿನಯರಾಜ್ (34) ಮೃತಪಟ್ಟ ದುರ್ದೈವಿ.
ಅಮೆಚೂರು ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ನಿನ್ನೆ ನಗರದ ಡಾನ್ ಬಾಸ್ಕೊ ಸಭಾಂಗಣದಲ್ಲಿ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ವಿನಯರಾಜ್ ಮೊದಲ ಬಾರಿಗೆ ಭಾಗವಹಿಸಿದ್ದರು. ಬಾಡಿ ಬಿಲ್ಡಿಂಗ್ ಪ್ರದರ್ಶನ ನೀಡುತ್ತಿರುವಾಗಲೇ ವಿನಯ್ ರಾಜ್ ಅಲ್ಲೇ ಕುಸಿದು ಬಿದ್ದರು. ತಕ್ಷಣ ವಿನಯ್ ರಾಜ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆ ಬಳಿಕ ಸ್ವಲ್ಪ ಚೇತರಿಸಿಕೊಂಡ ವಿನಯ್ ರಾಜ್ ಅವರಿಗೆ ನಂತರ ಉಸಿರಾಟದ ತೊಂದರೆ ಕಂಡುಬಂದಿದೆ .

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸಮೀಪದಲ್ಲೇ ಇರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ವಿನಯರಾಜ್ ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿದ್ದರು ಈ ಘಟನೆ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.