LATEST NEWS
ಬಿಜೆಪಿ ಸೇರ್ಪಡೆ ವದಂತಿಗೆ ಸ್ಪಷ್ಟನೆ ನೀಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಬಿಜೆಪಿ ಸೇರ್ಪಡೆ ವದಂತಿಗೆ ಸ್ಪಷ್ಟನೆ ನೀಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಉಡುಪಿ ನವೆಂಬರ್ 11: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆ ವದಂತಿ ಬಗ್ಗೆ ಹಾಲಾಡಿ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಕುಂದಾಪುರದಲ್ಲಿ ಮಾತನಾಡಿದ ಅವರು ಬಿಜೆಪಿಯಿಂದ ನನಗೆ ಆಹ್ವಾನ ಬಂದಿದ್ದು ನಿಜ, ಆದರೆ ತಾಂತ್ರಿಕ ಸಮಸ್ಯೆಗಳಿದ್ದು , ಆ ಸಮಸ್ಯೆಗಳು ಕಳೆದ ಕೂಡಲೇ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ಹೇಳಿದರು, ಸದ್ಯ ನಾನು ಪಕ್ಷೇತರ ಶಾಸಕನಾಗಿಯೇ ಇದ್ದೇನೆ, ನಾನು ಯಾವುದೇ ಆಸೆ- ಆಮಿಷಗಳಿಗೆ ಒಳಗಾಗಿ ಬಿಜೆಪಿ ಸೇರುತ್ತಿಲ್ಲ ಎಂದು ಹೇಳಿದರು.
ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರೆ ನನ್ನ ಶಾಸಕತ್ವ ಅನರ್ಹವಾಗುತ್ತದೆ. ಈ ಹಿನ್ನಲೆಯಲ್ಲಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ ಎಂದು ಹೇಳಿದರು. ನಾನು ಬಿಜೆಪಿಗೆ ಸೇರ್ಪಡೆಯಾಗುವಾಗ ಯಾವುದೇ ಬೇಡಿಕೆ ಇಟ್ಟು ಸೇರುವುದಿಲ್ಲ ಎಂದ ಅವರು. ಚುನಾವಣಾ ಘೋಷಣೆಯಾದ ಬಳಿಕ ನಾನು ಬಿಜೆಪಿಗೆ ಸೇರುತ್ತೇನೆ ಎಂದರು. ನಾನು ನನ್ನ ಕಾರ್ಯಕರ್ತರ ಅಭಿಪ್ರಾಯ ಪಡೆದೇ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಯನ್ನು ಅಲ್ಲಗೆಳೆದ ಅವರು, ಪರಿವರ್ತನಾ ಯಾತ್ರೆಗೆ ನಾನು ಸಾಮಾನ್ಯನಾಗಿ ಹೋಗುತ್ತೆನೆ ಆದರೆ ವೇದಿಕೆ ಏರುವುದಿಲ್ಲ ಎಂದರು.
ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದಾಗ ಸಚಿವ ಸ್ಥಾನ ನೀಡುವುದಾಗಿ ಬೆಂಗಳೂರಿಗೆ ಆಹ್ವಾನಿಸಿ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ತಪ್ಪಿದ್ದಾಗ ಬೇಸರಿಸಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಪಕ್ಷ ತೊರೆದಿದ್ದರು. ಆ ನಂತರ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಿಲ್ಲೆಯಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಜಯ ಗಳಿಸಿದ್ದರು.