UDUPI
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಆರೋಪಿಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಉಡುಪಿ, ಆಗಸ್ಟ್ 11 : ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಆರೋಪಿ ಅವರಿಗೆ ರಾಜೇಶ್ವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಉಡುಪಿಯ ಖ್ಯಾತ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟಿನ ನ್ಯಾಯಾಧೀಶರು ನಿರಾಕರಿಸಿದ್ದಾರೆ .ನ್ಯಾಯಾಧೀಶರಾದ ಎಸ್ .ಎ .ಬೋಬ್ದೆ ಹಾಗೂ ಎಲ್. ನಾಗೇಶ್ವರ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನಿರಾಕರಿಸಿದ್ದು ಅರ್ಜಿಯನ್ನು ತಿರಸ್ಕರಿಸಿದೆ. ಪ್ರಕರಣದಲ್ಲಿ ಇನ್ನೂ ತನಿಖೆ ಮುಗಿದಿಲ್ಲ ಹೆಚ್ಚುವರಿ ತನಿಖೆಯಾಗಬೇಕಿದೆ ಹಾಗಾಗಿ ಜಾಮೀನು ನೀಡುವುದಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ಅಥವಾ ಮುಂದಿನ ಆರು ತಿಂಗಳ ಬಳಿಕ ಮತ್ತೆ ಅರ್ಜಿ ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ರಾಜೇಶ್ವರಿ ಶೆಟ್ಟಿ ಪರ ವಕೀಲರಿಗೆ ಸೂಚಿಸಿದ್ದಾರೆ. ಜಾಮೀನು ಅರ್ಜಿಯೂ ಈ ಹಿಂದೆ ಜಿಲ್ಲಾ ನ್ಯಾಯಾಲಯ ಹೈಕೋರ್ಟಿನಲ್ಲಿ ಯೂ ತಿರಸ್ಕ್ರತ ಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೊರ್ಟ್ ಮೆಟ್ಟಿಲೇರಲಾಗಿತ್ತು. ಪ್ರಕಾರಣದ ಇನ್ನೋರ್ವ ಆರೋಪಿ ನಿರಂಜನ್ ಭಟ್ ಅವರಿಗೆ ಜುಲೈ 26 ರಂದು ರಾಜ್ಯ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು.