Connect with us

    DAKSHINA KANNADA

    ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಬೀದಿ ಕಾಳಗ…!!

    ಮಂಗಳೂರು, ಆಗಸ್ಟ್ 10 : ಕಾಲೇಜು ವಿದ್ಯಾರ್ಥಿಗಳು ಬೀದಿ ಕಾಳಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹಂಪನಕಟ್ಟಾ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.
    ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ತಂಡ ಮತ್ತೊಬ್ಬ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಮಾದಕ ವಸ್ತು ಸೇವನೆಯ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳ‌ ಮಧ್ಯದ ವೈಮನಸ್ಸು ಕಾಲೇಜು ಬಿಡುವ ವೇಳೆ  ನಡೆದಿದ್ದು ಕಾಲೇಜಿನ ಎದುರಿನ ರಸ್ತೆಯಲ್ಲಿಯೇ  ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿಕೊಂಡು ಹೋಗಿ ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ.ಯಾರೋ ಒಬ್ಬರು ಈ ದೃಶ್ಯವಳಿಗಳನ್ನು ಮೋಬೈಲ್ ನಲ್ಲಿ ಸೆರೆ ಹಿಡಿದು ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವಿಡಿಯೋಗಾಗಿ ಈ ಕೆಳಗಿನ ಲಿಂಕನ್ನು ಒತ್ತಿರಿ..

    Share Information
    Advertisement
    Click to comment

    You must be logged in to post a comment Login

    Leave a Reply