PUTTUR
ಮರಳು ಮಾಫಿಯಾ ವಿರುದ್ದ ಪುತ್ತೂರಿನಲ್ಲಿ ಪ್ರತಿಭಟನೆ

ಮರಳು ಮಾಫಿಯಾ ವಿರುದ್ದ ಪುತ್ತೂರಿನಲ್ಲಿ ಪ್ರತಿಭಟನೆ
ಪುತ್ತೂರು ಅಕ್ಟೋಬರ್ 7: ಜಿಲ್ಲೆಯಲ್ಲಿ ನಡೆಯುತ್ತಿರುವ ಮರಳು ಮಾಫಿಯಾ ಹಾಗೂ ಜಿಲ್ಲೆಯ ಜನರಿಗೆ ಕೈಗೆಟಕುವ ಬೆಲೆಯಲ್ಲಿ ಮರಳು ಸಿಗುವಂತಾಗಬೇಕೆಂದು ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತು.
ಪುತ್ತೂರಿನ ದರ್ಭೆ ವೃತ್ತದಿಂದ ಕಾಲ್ನಡಿಗೆ ಮರೆವಣಿಗೆಯ ಮೂಲಕ ಸಾಗಿದ ಪ್ರತಿಭಟನಾಕಾರರು ಪುತ್ತೂರು ಸಹಾಯಕ ಕಮಿಷನರ್ ಕಛೇರಿ ಮುಂದೆ ಸೇರಿ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರ ಎಂ.ಸ್ಯಾಂಡ್ ಮಾಫಿಯಾಕ್ಕೆ ಬಲಿಯಾಗಿ ದಕ್ಷಿಣಕನ್ನಡ ಜಿಲ್ಲೆಯ ಜನರಿಗೆ ಮರಳು ಸಿಗದಂತೆ ಮಾಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಜಿಲ್ಲೆಯಲ್ಲಿ ತೆಗೆದ ಮರಳನ್ನು ಹೊರ ಜಿಲ್ಲೆಗಳಿಗೆ ಸಾಗಿಸುವ ಮಾಫಿಯಾ ಹೆಚ್ಚಾಗುತ್ತಿದೆ ಎಂದರು.

ಸೋಮವಾರದ ಒಳಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಮರಳು ದಂಧೆಗೆ ಕಡಿವಾಣ ಹಾಕದೇ ಹೋದಲ್ಲಿ ಹೊರ ಜಿಲ್ಲೆಗಳಿಗೆ ತೆರಳುವ ಮರಳು ಲಾರಿಗಳನ್ನು ಸಾರ್ವಜನಿಕರೇ ತಡೆದು ನಿಲ್ಲಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಡಳಿತವನ್ನು ಎಚ್ಚರಿಸಿದರು.