Connect with us

    UDUPI

    ಮಣಿಪಾಲದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಭವನ

    ಮಣಿಪಾಲದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಭವನದ ಶಂಕುಸ್ಥಾಪನೆ ನಡೆಯಿತು.

    ಉಡುಪಿ, ಆಗಸ್ಟ್ 04: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ , ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವಕ್ಫ್ ಕಚೇರಿಗಳ ಸಂಕೀರ್ಣ ಮೌಲಾನಾ ಆಜಾದ್ ಭವನದ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮೀನುಗಾರಿಕಾ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಪ್ರಮೋದ್ ಮಧ್ವರಾಜ್ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಧ್ಯಕ್ಷ ಎಮ್.ಎ.ಗಫೂರ್ ಗುರುವಾರ ನೆರವೇರಿಸಿದರು.

    ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವಕ್ಫ್ ಕಚೇರಿಗಳು ಒಂದೇ ಕಟ್ಟಡದಲ್ಲಿ ಇದ್ದು, ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದ್ದು, ಇದರಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.

    ಹಿಂದುಳಿದ ವರ್ಗಗಳ ಸಮುದಾಯದವರಿಗೆ ಅನುಕೂಲವಾಗುವ ದೃಷ್ಟಿಯಿಂದ ದಿವಂಗತ ಶ್ರೀ ಡಿ. ದೇವರಾಜ ಅರಸು ಭವನವನ್ನು ಇದೇ ಸ್ಥಳದಲ್ಲಿ ನಿರ್ಮಾಣ ಮಾಡಲು ಪ್ರಸ್ತಾವನೆಯನ್ನು ಕಳುಹಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಚಿವರು ಸೂಚಿಸಿದರು.
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹರೀಶ್ ಗಾಂವ್ಕಾರ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪPರಾದ ಶ್ರೀಧರ್ ಭಂಡಾರಿ, ಹಾಗೂ ಇತರೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *