DAKSHINA KANNADA
ರಾಜಕೀಯ ಕೊಲೆಗಳ ಪ್ರಕರಣ ಎನ್ ಐ ಎ ಗೆ ವಹಿಸುವಂತೆ ಆಗ್ರಹ, ಸಂಸದರ ಪ್ರತಿಭಟನೆ
ನವದೆಹಲಿ, ಜುಲೈ 18: ಕರ್ನಾಟಕ ರಾಜ್ಯದಲ್ಲಿ ನಡೆದಿರುವ ರಾಜಕೀಯ ಕೊಲೆಗಳ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಆಗ್ರಹಿಸಿ, ಕರ್ನಾಟಕದ ಬಿಜೆಪಿ ಸಂಸದರು ಬಿಜಿಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡ್ಯೂರಪ್ಪ ನೇತ್ರತ್ವದಲ್ಲಿ ದೆಹಲಿ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ದೆಹಲಿಯ ಸಂಸತ್ ಭವನದ ಎದುರಿನ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ಶ್ರೀ ರಾಮುಲು, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಮತ್ತಿತರ ಸಂಸದರು ಪಾಲ್ಗೊಂಡಿದ್ದರು. ಇದಲ್ಲದೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಆಶಾಂತಿಗೆ ಕಾರಣವಾಗುತ್ತಿರುವ ಪಿ ಎಫ್ ಐ, ಕೆ ಎಫ್ ಡಿ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಪ್ರತಿಭಟನಾ ನಿರತ ಸಂಸದರು ಒತ್ತಾಯಿಸಿದರು. ಹಿರಿಯ ಪೋಲಿಸ್ ಅಧಿಕಾರಿಗಳ ಕಚ್ಚಾಟದಲ್ಲಿ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿ ರೂಪಾ ಅವರ ವರ್ಗಾವಣೆಯನ್ನು ಖಂಡಿಸಿದರು. ಈ ಎಲ್ಲಾ ವಿಚಾರಗಳು ಸಂಸತ್ ಅಧಿವೇಶನಲ್ಲಿ ಚರ್ಚೆಗೆ ಬರುವ ಸಾಧ್ಯತೆಗಳಿವೆ.