UDUPI
ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಈ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ & ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ
ಉಡುಪಿ, ಆಗಸ್ಟ್ 23: ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿಯ ರಾಷ್ಟ್ರೀಯ ಸೇವಾ ಯೋಜನೆ & ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಪ್ರಮೋದ್ ಮದ್ವರಾಜ್ ಅವರು ಇತ್ತೀಚಿಗೆ ನೆರವೇರಿಸಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಘಟಕವನ್ನು ಉದ್ಘಾಟಿಸಿ ನಾನು ರಾಷ್ಟ್ರೀಯ ಸೇವಾ ಯೋಜನೆಯ ಮಂತ್ರಿಯಾಗಿ ಇದನ್ನು ಉದ್ಘಾಟಿಸುತ್ತಿರುವುದು ಸಂತೋಷವಾಗಿದೆ, ವಿದ್ಯಾರ್ಥಿಗಳು ಬೇರೆಯವರಿಗೆ ಉಪಕಾರ ಮಾಡಿದಾಗ ಮಾತ್ರ ನೀವು ಬೆಳೆಯಲು ಸಾದ್ಯ. ಶೇಕಡಾ ನೂರರಷ್ಟು ಫಲಿತಾಂಶವನ್ನು ಕಾಲೇಜಿಗೆ ತರಬೇಕು ಎಂದು ತಿಳಿಸಿದರು. ಈ ಬಗ್ಗೆ ಅಧ್ಯಾಪಕರು ಹೆಚ್ಚಿನ ಕಾಳಜಿ ವಹಿಸಿ ವಿದ್ಯಾರ್ಥಿಗಳ ಸರ್ವೋತೋಮುಖ ಪ್ರಗತಿಗೆ ನೆರವಾಗಬೇಕು ಎಂಬ ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ವಿಜಯಲಕ್ಷ್ಮೀ ಪ್ರಭಾರ ಪಿ.ಯು.ವಿಭಾಗದ ಉಪನಿರ್ಧೇಶಕಿ,ಶ್ರೀ ದಿನೇಶ್ ಪುತ್ರನ್, ಉದ್ಯಾವರ ನಾಗೇಶ್, ನಿಕಟ ಪೂರ್ವ ಪ್ರಾಂಶುಪಾಲರಾದ ರಮೇಶ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳು ವಿದ್ಯಾರ್ಥಿಗಳು ಓದುವುದರ ಜೊತೆಗೆ ಉತ್ತಮ ನಡತೆಯ ಬಗ್ಗೆ ಕಿವಿಮಾತು ತಿಳಿಸಿದರು ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಉದ್ಘಾಟನೆಯ ಪ್ರಸ್ತಾವನೆಯನ್ನು ಎನ್.ಎಸ್.ಎಸ್.ಯೋಜನಾಧಿಕಾರಿಯಾದ ಅನುರಾಧ ಹೆಚ್.ಎಂ. ಮತ್ತು ಗ್ರೇಸಿಯವರು ಮಾಡಿದರು.