Connect with us

    UDUPI

    ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮುಖ್ಯ ಶಿಕ್ಷಕನ ಬಂಧನ

    ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮುಖ್ಯ ಶಿಕ್ಷಕನ ಬಂಧನ

    ಉಡುಪಿ ಸೆಪ್ಟೆಂಬರ್ 19: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ  ಆರೋಪ ದ ಮೇಲೆ ಮುಖ್ಯ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಎಂಬಲ್ಲಿನ ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಜೋಯಿಸ್ ( 58) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

    ನಿವೃತ್ತ ಅಂಚಿನಲ್ಲಿದ್ದ ಮುಖ್ಯ ಶಿಕ್ಷಕ ಶ್ರೀನಿವಾಸ್ ಜೋಯಿಸ್ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ  ಕಿರುಕುಳ ನೀಡುತಿದ್ದ ಎಂದು ಆರೋಪಿಸಲಾಗಿದೆ. ಈ ಹಿಂದೆಯೂ  ಶ್ರೀನಿವಾಸ್ ಜೋಯಿಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಕೇಳಿ ಬಂದಿತ್ತು  ಎಂದು ಹೇಳಲಾಗಿದೆ.

    ಶಿಕ್ಷಣ ಇಲಾಖೆ ನೀಡಿದ ದೂರಿನನ್ವಯ ಪೊಲೀಸರು ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಜೋಯಿಸ್ ಬಂಧಿಸಿದ್ದಾರೆ. ಶಿಕ್ಷಕ ಶ್ರೀನಿವಾಸ್ ಜೋಯಿಸ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply