LATEST NEWS
ಸ್ಕೇಟಿಂಗ್ ಚಾಂಪಿಯನ್ ಶಿಫ್ ನಲ್ಲಿ ಹೊಡೆದಾಡಿಕೊಂಡ ಸ್ಪರ್ಧಿಗಳು
ಸ್ಕೇಟಿಂಗ್ ಚಾಂಪಿಯನ್ ಶಿಫ್ ನಲ್ಲಿ ಹೊಡೆದಾಡಿಕೊಂಡ ಸ್ಪರ್ಧಿಗಳು
ಮಂಗಳೂರು ನವೆಂಬರ್ 29: ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ 33ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಇಬ್ಬರು ಸ್ಕೇಟಿಂಗ್ ಪಟುಗಳು ಸ್ಕೇಟಿಂಗ್ ರಿಂಗ್ ನಲ್ಲೇ ಹಿಗ್ಗಾಮುಗ್ಗ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರಿನ ಹೊಗೈಬೈಲ್‌ನಲ್ಲಿರುವ ಫ್ರಾನಿಸ್ಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಹೈಫ್ಲೈ ಸ್ಕೇಟಿಂಗ್ ಕ್ಲಬ್ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯಶಿಪ್ ನಡೆಯುತ್ತಿದ್ದ ವೇಳೆ ಈ ಹೊಡೆದಾಟ ನಡೆದಿದೆ.
16 ವರ್ಷದಕ್ಕಿಂತ ಮೇಲ್ಪಟ್ಟ ವಿಭಾಗದ ಫೈನಲ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನ ರಾಘವೇಂದ್ರ ಹಾಗೂ ಅಂಕಿತ್ ಎನ್ನುವ ಇಬ್ಬರು ಸ್ಕೇಟರ್‌ಗಳು ಪಿನಿಶಿಂಗ್ ಲೈನ್ ದಾಟುವ ಮೊದಲೇ ಉದ್ದೇಶ ಪೂರ್ವಕವಾಗಿಯೇ ಡಿಕ್ಕಿ ಹೊಡೆದು ಬಿದ್ದರು. ಬಿದ್ದ ತಕ್ಷಣ ಸ್ಕೇಟಿಂಗ್ ಪಟು ರಾಘವೇಂದ್ರ ಇನ್ನೋರ್ವ ಸ್ಕೇಟಿಂಗ್‌ಪಟು ಅಂಕಿತ್‌ಗೆ ಹಿಗ್ಗಾಮುಗ್ಗ ಥಳಿಸಿದ್ದಾನೆ.
ಬಳಿಕ ರೆಫ್ರಿಗಳು ಜಗಳವನ್ನು ಬಿಡಿಸಿದ್ದಾರೆ. ಕಳೆದ ವರ್ಷದ ಇದೇ ಅಂಕಿತ್ ರಾಘವೇಂದ್ರನಿಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಅದರ ರಿವೇಂಜ್ ಗೋಸ್ಕರವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಕಳೆದ ವರ್ಷ ಹಲ್ಲೆ ನಡೆದಾಗ ರಾಜ್ಯ ಸ್ಕೇಟಿಂಗ್ ಅಸೋಶೀಯೇಷನ್ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಈ ಘಟನೆ ಮರುಕಳಿಸಲು ಕಾರಣ ಎಂಬ ಆರೋಪ ಕೂಡ ಕೇಳಿ ಬಂದಿದೆ.
ಈ ಸ್ಕೇಟಿಂಗ್ ಪಟುಗಳ ಹಲ್ಲೆಯ ವೀಡೀಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಕೇಟಿಂಗ್‌ನಲ್ಲೂ ಇಂತಹ ಘಟನೆಗಳು ನಡೆಯುತ್ತಾ ,ಈ ಮಟ್ಟಕ್ಕೆ ಸ್ಕೇಟಿಂಗ್ ಬಂದಿದಿಯಾ ಎಂದು ಚರ್ಚೆ ಆರಂಭ ಗೊಂಡಿದೆ. ಸ್ಕೇಟರ್ ಗಳ ಪೋಷಕರೂ ಹಲ್ಲೆಗೆ ಬೆಂಬಲ ನೀಡಿದ್ದು ,ಈ ಹಲ್ಲೆ ಪ್ರಕರಣದ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.