LATEST NEWS
ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಗೆ ವಿರೋಧ – ಪೊಲೀಸರಿಂದ ಲಾಠಿಚಾರ್ಜ್

ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಗೆ ವಿರೋಧ – ಪೊಲೀಸರಿಂದ ಲಾಠಿಚಾರ್ಜ್
ಉಡುಪಿ ನವೆಂಬರ್ 13: ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆ ಉಡುಪಿ ಜಿಲ್ಲೆಯ ಕುಂದಾಪುರ ತಲುಪಿದೆ. ಕುಂದಾಪುರದಲ್ಲಿ ಇಂದು ನಡೆದ ಪರಿವರ್ತನಾ ಸಮಾವೇಶದಲ್ಲಿ ಹೈಡ್ರಾಮಾ ನಡೆದು ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬಿಜೆಪಿಯ ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆ ಉಡುಪಿ ಜಿಲ್ಲೆಯ ಕುಂದಾಪುರ ತಲುಪಿದ್ದು ಕುಂದಾಪುರದಲ್ಲಿ ಪರಿವರ್ತನಾ ಸಮಾವೇಶ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಂದು ಸಭಿಕರ ಸಾಲಿನಲ್ಲಿ ಕುಳಿತಿದ್ದರು.

ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಬಣದ ಕಾರ್ಯಕರ್ತರು ಬಹಿರಂಗ ಆಕ್ರೋಶ ವ್ಯಕ್ತಪಡಿಸಿದರು. ಈ ನಡುವೆ ಹಾಲಾಡಿ ಬಣ ಮೂಲ ಬಿಜೆಪಿ ಬಣದ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟಕ್ಕೆ ಕಾರ್ಯಕರ್ತರು ಮುಂದಾದರು.
ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಬೇಕಾಯಿತು. ಲಾಠಿಚಾರ್ಜ್ ಮಾಡಿ ಎರಡು ಬಣದ ಕಾರ್ಯಕರ್ತರ ಗುಂಪನ್ನು ಚದುರಿಸಿದ ಪೊಲೀಸರು ಪರಿಸ್ಥಿತಿ ತಣ್ಣಗಾಗಿಸಿದರು.
ಈ ನಡುವೆ ಮಧ್ಯ ಪ್ರವೇಶಿಸಿದ ಯಡಿಯೂರಪ್ಪ ಹಾಲಾಡಿ ವಿರೋಧಿಗಳ ವಿರುದ್ದ ಕಿಡಿಕಾರಿದರು. ಹಾಲಾಡಿಯೇ ನಮ್ಮ ನಾಯಕ ಮುಂದಿನ ಶಾಸಕ, ಒಪ್ಪದವರು ಪಕ್ಷ ಬಿಟ್ಟು ಹೋಗಿ ಎಂದು ಸಮಾವೇಶದಲ್ಲೆ ವಿರೋಧಿಗಳ ವಿರುದ್ದ ಯಡಿಯೂರಪ್ಪ ಹರಿಹಾಯ್ದರು. ಈ ಸಂದರ್ಭದಲ್ಲಿ ಸ್ವಲ್ಪ ಕಾಲ ಸಮಾವೇಶದಲ್ಲಿ ಗೊಂದಲದ ವಾತಾವರಣ ಏರ್ಪಟ್ಟಿತ್ತು.