Connect with us

    LATEST NEWS

    ಹೆಬ್ರಿಯಲ್ಲಿ ಪೊಲೀಸರ ಕಾರ್ಯಾಚರಣೆ 33 ನಾಡಾ ಬಾಂಬ್ ಪತ್ತೆ

    ಹೆಬ್ರಿಯಲ್ಲಿ ಪೊಲೀಸರ ಕಾರ್ಯಾಚರಣೆ 33 ನಾಡಾ ಬಾಂಬ್ ಪತ್ತೆ

    ಉಡುಪಿ ನವೆಂಬರ್ 22: ಕಾಡು ಪ್ರಾಣಿಗಳನ್ನು ಸಾಯಿಸಲು ಉಪಯೋಗಿಸಲು ಅಕ್ರಮವಾಗಿ ಸಾಗಿಸುತ್ತಿದ್ದ 33 ನಾಡಾ ಬಾಂಬ್ ಗಳನ್ನು ಉಡುಪಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

    ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಕರೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಜಿಲ್ಲಾ ಎಸ್ಪಿ ಡಾ. ಸಂಜೀವ ಎಂ. ಪಾಟೀಲ್ ಖಚಿತ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸರು ಶಿವಪುರ ಗ್ರಾಮದ ಬ್ಯಾಣ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ತಪಾಸಣೆ ನಡೆಸಿದಾಗ 33 ನಾಡಬಾಂಬ್ ಗಳು ಪತ್ತೆಯಾಗಿದ ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ಪತ್ತೆಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಗೇಶ್ ನಾಯಕ್, ಗುಣಕರ್ ಶೆಟ್ಟಿ, ಲಕ್ಷ್ಮಣ ಶೆಟ್ಟಿ ಎಂದು ಗುರುತಿಸಲಾಗಿದೆ.

    ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ ನಾಡಬಾಂಬು ಗಳನ್ನು ಕಾಡು ಪ್ರಾಣಿಗಳನ್ನು ಸಾಯಿಸಲು ಬಳಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply