Connect with us

UDUPI

ಸಾಲಿಗ್ರಾಮ: 10ನೇ ತರಗತಿ ವಿಧ್ಯಾರ್ಥಿ ಆತ್ಮಹತ್ಯೆ

ಉಡುಪಿ ಜುಲೈ 7: ಉಡುಪಿ ಜಲ್ಲೆಯ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿಯನ್ನು ಕಾರ್ತಿಕ ( 15) ಎಂದು ಗುರುತಿಸಲಾಗಿದ್ದು, ಈತ ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದಾನೆ.


ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕೊರೋನಾ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ತಾಯಿ ರುದ್ರಮ್ಮ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಇದೇ ವಿಚಾರವಾಗಿ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಮೃತ ವಿಧ್ಯಾರ್ಥಿನಿ ಕೊವೀಡ್ ವರದಿ ಬಂದ ಬಳಿಕ ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

comments