Connect with us

    LATEST NEWS

    ದಕ್ಷಿಣಕನ್ನಡದಲ್ಲಿ 10 ತಿಂಗಳ ಕಂದಮ್ಮನಿಗೆ ಕೊರೊನಾ ಸೊಂಕು

    ದಕ್ಷಿಣಕನ್ನಡದಲ್ಲಿ 10 ತಿಂಗಳ ಕಂದಮ್ಮನಿಗೆ ಕೊರೊನಾ ಸೊಂಕು

    ಬಂಟ್ವಾಳ ಮಾ.27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟೀವ್ ಪ್ರಕರಣ ದೃಢಪಟ್ಟಿದೆ. ಈ ಬಾರಿ 10 ತಿಂಗಳ ಹಸುಳೆಗೆ ಈ ರೋಗ ಭಾಧಿಸಿದ್ದು, ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

    ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ತಿಂಗಳ ಮಗುವನ್ನು ಮಾ.23ರಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರನೆ ದಿನ ಮಗುವಿನ ಗಂಟಲಿನ ದ್ರವವನ್ನು ಕೋವಿಡ್ – 19 ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ಅಂತಿಮ ವರದಿ ಬಂದಿದ್ದು ಮಗುವಿಗೆ ಕೊರೋನ ಸೊಂಕು ತಗಲಿರುವುದು ದೃಡಪಟ್ಟಿದೆ ಎಂದು ತಿಳಿಸಲಾಗಿದೆ.

    ಮಗುವಿನಲ್ಲಿ ಕೊರೊನಾ ಸೊಂಕು ಪತ್ತೆಯಾದ ಕಾರಣಕ್ಕಾಗಿ ಇಡೀ ಗ್ರಾಮವನ್ನೇ ಕ್ವಾರಂಟೈನ್ ಮಾಡಲಾಗಿದೆ. ಈ ಗ್ರಾಮಕ್ಕೆ ಹೊರಗಿಂದ ಜನ ಬರುವುದು ಹಾಗೂ ಗ್ರಾಮದಿಂದ ಜನ ಹೊರಡುವುದಕ್ಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.

    ಮಗು ಈಗ ಸಂಪೂರ್ಣ ಚೇತರಿಸಿಕೊಂಡಿದೆ. ತುರ್ತು ನಿಗಾ ಘಟಕ (ಐಸಿಯು)ದಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಮಗುವಿನ ತಾಯಿ ಮತ್ತು ಅಜ್ಜಿಯನ್ನು ವೈದ್ಯರು ಆಸ್ಪತ್ರೆಯಲ್ಲೇ ಉಳಿಸಿಕೊಂಡಿದ್ದಾರೆ. ಅವರ ಭೇಟಿಗೆ ಯಾರಿಗೂ ಅವಕಾಶ ನೀಡುತ್ತಿಲ್ಲ. ಅಲ್ಲದ ಕುಟುಂಬದ ಇತರ ಸದಸ್ಯರನ್ನು ಮನೆಯಲ್ಲೇ ಇರುವಂತ ಪೊಲೀಸರು ಹಾಗೂ ವೈದ್ಯರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply