LATEST NEWS
ಒಡಿಶಾದಲ್ಲಿ ಸಿಡಿಲಘಾತಕ್ಕೆ 10 ಮಂದಿ ಬಲಿ- ಹಲವರು ಗಂಭೀರ ಗಾಯ..!

ಒಡಿಶಾದಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಆರು ಜಿಲ್ಲೆಗಳಲ್ಲಿ ಸಿಡಿಲಾಘಾತಕ್ಕೆ ಕನಿಷ್ಠ 10 ಜನರು ಸಾವನ್ನಪ್ಪಿದ್ದು ಅನೇಕರು ಗಂಭೀರ ಗಾಯಗೊಂಡಿದ್ದಾರೆ.
ಭುವನೇಶ್ವರ : ಒಡಿಶಾದಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಆರು ಜಿಲ್ಲೆಗಳಲ್ಲಿ ಸಿಡಿಲಾಘಾತಕ್ಕೆ ಕನಿಷ್ಠ 10 ಜನರು ಸಾವನ್ನಪ್ಪಿದ್ದು ಅನೇಕರು ಗಂಭೀರ ಗಾಯಗೊಂಡಿದ್ದಾರೆ.

ಖುರ್ದಾ ಜಿಲ್ಲೆಯಲ್ಲಿ ನಾಲ್ವರು, ಬೋಲಂಗಿರ್‌ನಲ್ಲಿ ಇಬ್ಬರು ಸೇರಿದಂತೆ ಅಂಗುಲ್, ಬೌಧ್, ಜಗತ್‌ಸಿಂಗ್‌ಪುರ ಮತ್ತು ಧೆಂಕನಾಲ್ ಎಂಬಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಖುರ್ದಾದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ಮಾಹಿತಿ ನೀಡಿದೆ.
ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶದಲ್ಲಿ ನಿನ್ನೆ ಗುಡುಗು, ಮಿಂಚುಸಹಿತ ಧಾರಾಕಾರ ಮಳೆ ಸುರಿದಿದೆ.
ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ಕೊಟ್ಟಿದೆ.
ಸೈಕ್ಲೋನಿಕ್ ಪರಿಚಲನೆಯು ಮಾನ್ಸೂನ್ ಸಕ್ರಿಯಗೊಳಿಸಿದ್ದು ಇದರಿಂದಾಗಿ ರಾಜ್ಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಭುವನೇಶ್ವರ ಮತ್ತು ಕಟಕ್‌ನಲ್ಲಿ ಮಧ್ಯಾಹ್ನ 2 ಗಂಟೆಯ ಹೊತ್ತಿಗೆ 90 ನಿಮಿಷಗಳ ಕಾಲಾವಧಿಯಲ್ಲಿ 126 ಮಿ.ಮೀ ಮತ್ತು 95.8 ಮಿ.ಮೀ ಮಳೆಯಾಗಿದೆ.
ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದೆ. ಇದು ಸೆಪ್ಟೆಂಬರ್ 3ರ ಸುಮಾರಿಗೆ ಬಂಗಾಳ ಕೊಲ್ಲಿಯ ಉತ್ತರಕ್ಕೆ ಬರುವ ಸಾಧ್ಯತೆ ಇದೆ ಎಂದು ಇಲ್ಲಿನ ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕ ರು ಮಾಹಿತಿ ನೀಡಿದ್ದು ಗುಡುಗುಸಹಿತ ಮಳೆಯಾಗುವ ವೇಳೆ ಜನರು ಅನಗತ್ಯ ಓಡಾಟ ಕಡಿಮೆ ಮಾಡಬೇಕು, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಸೂಚಿಸಿದೆ.