KARNATAKA
ಬೆಳಗಾವಿ: ಈಜಲು ಹೋದ ಬಾಲಕರಲ್ಲಿ ಓರ್ವ ಮೃತ್ಯು – ಮತ್ತೋರ್ವನ ರಕ್ಷಣೆ..!
ನೀರಿನಲ್ಲಿ ಈಜಲು ಕೆರೆಗೆ ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದೆ.
ಬೆಳಗಾವಿ : ನೀರಿನಲ್ಲಿ ಈಜಲು ಕೆರೆಗೆ ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ನೀರಿಗೆ ಬಿದ್ದಿದ್ದ ಮತ್ತೋರವ ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸದ್ ಅಗಸಿಮನಿ ಮೃತಪಟ್ಟ ಬಾಲಕನಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸರಖೋಡ ಗ್ರಾಮದಲ್ಲಿ ಘಟನೆ ನಡೆದಿದೆ.
ಅಸದ್ ಅಗಸಿಮನಿ(10) ನೀರಲ್ಲಿ ಮುಳುಗಿ ಮೃತಪಟ್ಟ ಬಾಲಕನಾದರೆ ಸ್ವಯಂ ಪಾಗಾದ್ (10) ಸ್ಥಳೀಯರಿಂದ ರಕ್ಷಿಸಲ್ಪಟ್ಟಿದ್ದಾನೆ.
ಇಬ್ಬರು ಬಾಲಕರು ಅಕ್ಕಪಕ್ಕದ ಮನೆಯವರಾಗಿದ್ದು ಸೋಮವಾರ ಮುಂಜಾನೆ ಅವರಿಬ್ಬರೂ ಬಸರಖೋಡರ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನೀರುಪಾಲಾಗಿದ್ದಾರೆ.
ಘಟನೆಯಿಂದ ಬಸರಖೋಡ ಗ್ರಾಮದಲ್ಲಿ ಶೋಕ ಮಡುಗಟ್ಟಿದ ವಾತಾವರಣ ಕಂಡುಬಂದಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.