Connect with us

    LATEST NEWS

    ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ 11 ಜನ…!!

    ವಿದಿಶಾ:ಬಾವಿಗೆ ಬಿದ್ದಿದ್ದ ಬಾಲಕಿಯನ್ನು ರಕ್ಷಣೆ ಮಾಡಲು ಹೋಗಿ ಬಾವಿಗೆ ಬಿದ್ದಿದ್ದ 30 ಮಂದಿಯಲ್ಲಿ 11 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಬಾವಿಯಿಂದ 11 ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ.


    ಈ ಘಟನೆ ವಿದಿಶಾ ಜಿಲ್ಲೆಯಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗಂಜ್​ ಬಸೋಡಾದಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕಿಯೊಬ್ಬಳು ಬಾವಿಗೆ ಬಿದ್ದಿದ್ದಳು, ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪ್ರದೇಶದ ಜನರ ಆಗಮಿಸಿ ಬಾವಿಯ ಸುತ್ತಲೂ ನೆರೆದಿದ್ದರು. ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಗ್ರಾಮಸ್ಥರು ಪ್ರಯತ್ನ ಮಾಡುವಾಗ ಭಾರದಿಂದ ಬಾವಿಯ ಮೇಲ್ಛಾವಣಿ ಕುಸಿದು ಜನರು ಬಾವಿ ಒಳಗೆ ಬಿದ್ದಿದ್ದರು.


    ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಇದೀಗ 11 ಮೃತದೇಹಗಳನ್ನು ಬಾವಿಯಿಂದ ಹೊರತೆಗೆದಿದ್ದು, 19 ಮಂದಿಯನ್ನು ಈವರೆಗೆ ರಕ್ಷಣೆ ಮಾಡಲಾಗಿದೆ. ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ 5 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಲ್ಲದೆ, ರಕ್ಷಣಾ ಸ್ಥಳದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply