LATEST NEWS
ಸೇನಾ ಹೆಲಿಕಾಪ್ಟರ್ ಪತನ- 11ಕ್ಕೇರಿದ ಸಾವಿನ ಸಂಖ್ಯೆ…ಜನರಲ್ ಬಿಪಿನ್ ರಾವತ್ ಸ್ಥಿತಿ ಗಂಭೀರ

ಚೆನ್ನೈ ಡಿಸೆಂಬರ್ 08: ರಕ್ಷಣಾ ಪಡೆಗಳ ಮುಖ್ಯಸ್ಥ (Chief of Defence Staff – CDS) ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಘಟನಾ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 11 ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆಯಲ್ಲಿ ರಾವತ್ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಲಿಕಾಪ್ಟರ್ ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವರಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.