KARNATAKA
ಬೆಂಗಳೂರು ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತಕ್ಕೆ 12 ಬಲಿ..!
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 12 ಜನ ಸಾವಿಗೀಡಾಗಿದ್ದಾರೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 12 ಜನ ಸಾವಿಗೀಡಾಗಿದ್ದಾರೆ.
ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ತಮಿಳುನಾಡಿನಿಂದ ಬಂದ ಪಟಾಕಿಯನ್ನು ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಅಂಗಡಿಯೊಳಡೆ ಪರಿಶೀಲನೆ ನಡೆಸುವಾಗ, 12 ಮೃತದೇಹಗಳು ಪತ್ತೆಯಾಗಿವೆ.
ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ.
ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 30-40 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಹಿಂಬಾಗಿಲಿನಿಂದ ಹೊರಬಂದಿದ್ದರಿಂದ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್ ಗಳು ಸುಟ್ಟು ಕರಕಲಾಗಿವೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.