DAKSHINA KANNADA
ಅತ್ಯಾಚಾರಿ ಕುಟುಂಬಕ್ಕೆ ಸಾಂತ್ವನ ಹೇಳಿ ಎಡವಟ್ಟು ಮಾಡಿದ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ
ಅತ್ಯಾಚಾರಿ ಕುಟುಂಬಕ್ಕೆ ಸಾಂತ್ವನ ಹೇಳಿ ಎಡವಟ್ಟು ಮಾಡಿದ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ
ಮಂಗಳೂರು,ಎಪ್ರಿಲ್ 15 : ಜಮ್ಮ ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಪ್ರಕರಣ ದ ವಿರುದ್ದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರೊಬ್ಬರು ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಹೇಳಿ ಪ್ರತಿಭಟನಾ ಸಭೆಯಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಜಮ್ಮುವಿನ ಅತ್ಯಾಚಾರ ಘಟನೆ ಖಂಡಿಸಿ ಮಂಗಳೂರಿನ ಮಹತ್ಮಾ ಗಾಂಧಿ ಪ್ರತಿಮೆ ಎದುರು ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಆಯೋಜಿನಲಾಗಿತ್ತು.
ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಮೆನದ ಬತ್ತಿ ಉರಿಸಿ ಘಟನೆ ಖಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ನ ಜಿಲ್ಲಾದ್ಯಕ್ಷೆ ಶಾಲೆಟ್ ಪಿಂಟೋ ಅವರು ದೇಶದಲ್ಲಿ ಮಹಿಳೆಯರಿಗೆ ಹಾಗು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು ಆತಂಕದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಕೇಂದ್ರ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಕೇಂದ್ರಸರ್ಕಾರದ ವಿರುದ್ದ ಮಾತನಾಡುವ ಬರದಲ್ಲಿ ಶಾಲೆಟ್ ಪಿಂಟೋ ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಪ್ರಸಂಗವೂ ನಡೆಯಿತು.
ಅತ್ಯಾಚಾರ ಪ್ರಕರಣದ ಕುರಿತು ಮಾತನಾಡುವ ಭರಾಟೆಯಲ್ಲಿ ಅಧ್ಯಕ್ಷರು ಎಡವಟ್ಟು ಮಾಡಿಕೊಂಡು “ಅತ್ಯಾಚಾರಿಗಳ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ”.
“ಅವರ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ”.ಇದಕ್ಕೆ “ಎಲ್ಲಾ ಮಹಿಳೆಯರು ಧ್ವನಿಯಾಗಬೇಕು” ಎಂದು ಹೇಳಿಕೆ ನೀಡಿಯೇ ಬಿಟ್ಟರು.
ಶಾಲೆಟ್ ಪಿಂಟೋ ಅವರ ಈ ಹೇಳಿಕೆ ಈಗ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿವೆ.
ವಿಡಿಯೋಗಾಗಿ…