LATEST NEWS
RAIPUR – ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿ 13 ಮಂದಿ ಸಾವು

ರಾಯ್‌ಪುರ, ಮೇ 12: ಲಾರಿ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನಪ್ಪಿದ ಘಟನೆ ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ 9 ಮಹಿಳೆಯರು ನಾಲ್ಕು ಮಕ್ಕಳು ಸೇರಿದಂತೆ 13 ಮಂದಿ ಸಾವನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯ್‌ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಮಾತನಾಡಿ, ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು.

ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಲಾರಿ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.