Connect with us

LATEST NEWS

ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತ – 13ಕ್ಕೇರಿದ ಸಾವಿನ ಸಂಖ್ಯೆ

ಚೆನ್ನೈ: ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ ಕೂನೂರು ಬಳಿ ಪತನಗೊಂಡ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿದ್ದ ಪ್ರಯಾಣಿಸುತ್ತಿದ್ದ 14 ಮಂದಿಯಲ್ಲಿ 13 ಮಂದಿ ಸಾವನಪ್ಪಿದ್ದಾರೆ ಎಂದು ವರದಿಗಳು ಬಂದಿವೆ.


ಇತ್ತೀಚಿನ ವರದಿಗಳ ಪ್ರಕಾರ, ಪ್ರಯಾಣಿಸುತ್ತಿದ್ದ 14 ಜನರ ಪೈಕಿ 13 ಮಂದಿ ಸಾವಿಗೀಡಾಗಿದ್ದಾರೆ. ಡಿಎನ್‌ಎ ಪರೀಕ್ಷೆಯ ಮೂಲಕ ಮೃತ ದೇಹಗಳನ್ನು ಗುರುತಿಸಿರುವುದಾಗಿ ವರದಿಯಾಗಿದೆ.


ವೆಲ್ಲಿಂಗ್ಟನ್‍ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆಯಲಿದ್ದ ಕೆಡೆಟ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾವತ್ ಸೇರಿ 14 ಮಂದಿ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದರು. ಇನ್ನೇನು ಲ್ಯಾಂಡ್‌ ಆಗಲು 10 ಕಿ.ಮೀ. ಇರುವಂತೆ ಮಧ್ಯಾಹ್ನ 12:20ರ ಸುಮಾರಿಗೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿಯಾಗಿ ಪತನಗೊಂಡಿದೆ. ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದವರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಬಿಪಿನ್ ರಾವತ್ ಅವರ ಪತ್ನಿಯೂ ಮೃತರಾಗಿದ್ದು, ರಾವತ್ ಅವರ ಸ್ಥಿತಿ ಗಂಭೀರವಾಗಿದೆ.

Advertisement
Click to comment

You must be logged in to post a comment Login

Leave a Reply