LATEST NEWS
ಕಾರು, ವ್ಯಾನ್ ಮೇಲೆ ಉರುಳಿ ಬಿದ್ದ ಕಲ್ಲು ತುಂಬಿದ್ದ ಟ್ರಕ್ – 13 ಮಂದಿ ಸಾವು

ಪಶ್ಚಿಮ ಬಂಗಾಳ : ಗುಜರಾತ್ ನ ಸೂರತ್ ನಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ತೀವ್ರ ಅಪಘಾತ ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಪುರಿ ನಗರದಲ್ಲಿ ಮಂಗಳವಾರ ರಾತ್ರಿ ದುರಂತ ನಡೆದಿದ್ದು. ದಟ್ಟ ಮಂಜು ಆವರಿಸಿದ ಪರಿಣಾಮ ಕಲ್ಲು ತುಂಬಿದ್ದ ಟ್ರಕ್ ಒಂದು ಕಾರು ಮತ್ತು ವ್ಯಾನ್ ಮೇಲೆ ಉರುಳಿ ಬಿದ್ದಿದೆ. ಸ್ಥಳದಲ್ಲೆ 13 ಮಂದಿ ಸಾವನಪ್ಪಿದ್ದು, ಅಪಘಾತದಲ್ಲಿ ಹಲವರು ಸ್ಥಿತಿ ಗಂಭೀರವಾಗಿದೆ.

ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಾಹನದಲ್ಲಿದ್ದವರ ಬಗ್ಗೆ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ತಂಡ ಘಟನೆ ನಡೆದ 10 ನಿಮಿಷದಲ್ಲಿಯೇ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಕ್ರೇನ್ ಮೂಲಕ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ದಟ್ಟ ಮಂಜು ಕವಿದ ಪರಿಣಾಮ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿರಬಹುದು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಶಂಕೆ ವ್ಯಕ್ತಪಡಿಸಿದ್ದಾರೆ.