LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ 131 ಮಂದಿಗೆ ಕೊರೊನಾ ಸೊಂಕು; 50ಕ್ಕೆ ಏರಿದ ಸಾವಿನ ಸಂಖ್ಯೆ
ಮಂಗಳೂರು ಜುಲೈ13: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 131 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ನಾಲ್ವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಅರ್ಧ ಶತಕ ದಾಖಲಿಸಿದೆ. ಇಂದಿನ 131 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2361 ಕ್ಕೆ ಏರಿಕೆಯಾಗಿದೆ.
ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಲ್ಲಿ 16, 63 ILI, SARI 10, ಸಂಪರ್ಕ ಪತ್ತೆಯಾಗದ 38 ಮಂದಿ, ಕತಾರ್, ದುಬೈನಿಂದ ಬಂದಿದ್ದ 4 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲೆಯಲ್ಲಿ 62 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1467 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ 4 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
You must be logged in to post a comment Login