Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆ 132 ಕೊರೊನಾ ಪ್ರಕರಣ, 6 ಸಾವು

ಮಂಗಳೂರು ಅಗಸ್ಟ್ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಇನ್ನು ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 132 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ.ಇಂದಿನ 132 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7207 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 195 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3305 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 220 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -81, ಬಂಟ್ವಾಳ -22, ಸುಳ್ಯ -3 ಬೆಳ್ತಂಗಡಿ – 4, ಪುತ್ತೂರು -6, ಹೊರ ಜಿಲ್ಲೆಯವರು -16 ಪ್ರಕರಣಗಳಿವೆ.

Facebook Comments

comments