LATEST NEWS
ದಕ್ಷಿಣಕನ್ನಡ 139 ಕೊರೊನಾ ಪ್ರಕರಣ 6 ಸಾವು
ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 139 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 139 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 5852 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 54 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3008 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 159 ಕ್ಕೆ ಏರಿಕೆಯಾಗಿದೆ.

ADVERTISEMENT