Connect with us

FILM

ರೀಲ್ಸ್ ರಾಣಿ ಸೋನು ಶ್ರೀನಿವಾಸ ಗೌಡಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು ಮಾರ್ಚ್ 25 : ಯುಟ್ಯೂಬ್ ಕಂಟೆಂಟ್ ಗಾಗಿ ಬಾಲಕಿಯೊಬ್ಬಳ ಅಕ್ರಮ ದತ್ತು ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸೋನು ಗೌಡ ಅವರಿಗೆ ಏಪ್ರಿಲ್ 8 ರವರೆಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.  ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ‌ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ.


ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು.


ಅಪ್ರಾಪ್ತ ಬಾಲಕಿಯನ್ನ ಸೋನುಗೌಡ ಆಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಮತ್ತಷ್ಟು ಬೆಳವಣಿಗೆ ಕಂಡುಬರುತ್ತಿವೆ. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *