LATEST NEWS
ದಕ್ಷಿಣಕನ್ನಡ – ಇಂದು ಕೊರೊನಾ ಪಾಸಿಟಿವ್ 144; ಆಸ್ಪತ್ರೆಯಿಂದ 209 ಮಂದಿ ಡಿಸ್ಚಾರ್ಜ್
ಮಂಗಳೂರು ಅಗಸ್ಟ್ 17: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 144 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 144 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9022 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 209 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2091 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಕೂಡ ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 277 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -88, ಬಂಟ್ವಾಳ – 18, ಸುಳ್ಯ -1, ಬೆಳ್ತಂಗಡಿ – 10, ಪುತ್ತೂರು – 8, ಹೊರ ಜಿಲ್ಲೆಯವರು – 19 ಪ್ರಕರಣಗಳಿವೆ.