Connect with us

KARNATAKA

ಶಿವಮೊಗ್ಗ ನಗರದಾಧ್ಯಂತ ಫೆ.26 ರವರೆಗೆ 144 ಸೆಕ್ಷನ್ ವಿಸ್ತರಣೆ

ಶಿವಮೊಗ್ಗ, ಫೆಬ್ರವರಿ 24: ಹರ್ಷ ಹತ್ಯೆ ಪ್ರಕರಣದ ನಂತರ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಸಂಬಂಧ ಆದೇಶ ಹೊರಡಿಸಿರುವಂತ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯೊಳಗೆ ಸಿಆರ್ ಪಿಸಿ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ದಿನಾಂಕ 26-02-2022ರ ಬೆಳಿಗ್ಗೆ 9 ಗಂಟೆಯವರೆಗೆ ಜಾರಿಗೊಳಿಸಿರೋದಾಗಿ ತಿಳಿಸಿದ್ದಾರೆ.

ನಿಷೇಧಾಜ್ಞೆಯ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಯಾವುದೇ ಮೆರವಣಿಗೆ ಸಭೆ, ಸಮಾರಂಭಗಳು, ವಿಜಯೋತ್ಸವ, ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೋ ನಡೆಸುವಂತಿಲ್ಲ ಎಂದಿದ್ದಾರೆ.

ಅಲ್ಲದೇ ಎಲ್ಲಾ ವ್ಯಾಪಾರದ ಅಂಗಡಿ, ಮುಂಗಟ್ಟುಗಳನ್ನುಮುಚ್ಚುವುದು. ಹಾಲು, ದಿನಸಿ ಮತ್ತು ತರಕಾರಿ ಖರೀದಿಗೆ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಮಾತ್ರ ಅನುಮತಿ ಎಂದು ಹೇಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *