Connect with us

    LATEST NEWS

    15 ವರ್ಷದ ಅಪ್ರಾಪ್ತೆ ಮೇಲೆ 8 ತಿಂಗಳ ಅವಧಿಯಲ್ಲಿ 33 ಮಂದಿಯಿಂದ ಅತ್ಯಾಚಾರ

    ಮುಂಬೈ: 15 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆ 33 ಮಂದಿ ಕಾಮುಕರು ಎಂಟು ತಿಂಗಳ ಅವದಿಯಲ್ಲಿ ವಿವಿಧ ಪ್ರದೇಶಗಳಲ್ಲಿ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 28 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.


    ಅಪ್ರಾಪ್ತೆ ನೀಡಿದ ದೂರಿನ ಆಧಾರದ ಮೇಲೆ 33 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು ಅಪ್ರಾಪ್ತೆಯ ಸ್ನೇಹಿತರಾಗಿದ್ದಾರೆ. ಎಂಟು ತಿಂಗಳ ಅವಧಿಯಲ್ಲಿ ಹಲವು ಬಾರಿ 15 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ವರ್ಷದ ಜನವರಿ 29 ರಿಂದ ಸೆಪ್ಟೆಂಬರ್ 22 ರ ನಡುವೆ ಹಲವು ಕಡೆಗಳಲ್ಲಿ ಅನೇಕ ಬಾರಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

    ಸಂತ್ರಸ್ತೆ 33 ಆರೋಪಿಗಳ ಹೆಸರನ್ನು ಹೇಳಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆ ನೀಡಿರುವ ದೂರಿನ ಆಧಾರದ ಮೇಲೆ 33 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) 376 ಎನ್ ಪದೇ ಪದೇ ಅತ್ಯಾಚಾರ) 376 ಡಿ( ಗ್ಯಾಂಗ್ ರೇಪ್ ) 376 (3) ಅಪ್ರಾಪ್ತೆ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ಡೊಂಬಿವ್ಲಿಯ ಮಾನ್ಪದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
    ಅಪ್ರಾಪ್ತ ಬಾಲಕಿ ಕಾಲ್ವಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದುಷ್ಕರ್ಮಿಗಳಿಗೆ ತೀವ್ರ ಶಿಕ್ಷೆಯಾಗಬೇಕೆಂದು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಒಕ್ಕಾಯಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply