Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆ ಇಂದು 162 ಕೊರೊನಾ ಪ್ರಕರಣ ಪತ್ತೆ

    ಮಂಗಳೂರು ಜುಲೈ22: ಲಾಕ್ ಡೌನ್ ನ 7 ನೇ ದಿನದಲ್ಲಿರುವ ದಕ್ಷಿಣಕನ್ನಡದಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 162 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.ಇಂದಿನ 162  ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3996 ಕ್ಕೆ ಏರಿಕೆಯಾಗಿದೆ.


    ಇಂದು ಜಿಲ್ಲೆಯಲ್ಲಿ 69 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2682 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು ಕೂಡ ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply