UDUPI
163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘನೆ
ಉಡುಪಿ ಜುಲೈ 13: ಕುಂದಾಪುರದಲ್ಲಿ ವ್ಯಕ್ತಿಯೊಬ್ಬ 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿರುವ ಘಟನೆ ನಡೆದಿದ್ದು, ವ್ಯಕ್ತಿಯ ವಿರುದ್ದ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಬಯಿನಿಂದ ಕೋಟೇಶ್ವರಕ್ಕೆ ಬಂದಿದ್ದ ಸಹಬ್ ಸಿಂಗ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪಿ. ಈತ ಕುಂದಾಪುರದಲ್ಲಿ ಗ್ಲಾಸ್ ಮತ್ತು ಫ್ಲೈ ವುಡ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಜೂನ್ 29 ರಂದು ಕೋಟೇಶ್ವರದ ಬೈಪಾಸ್ ಬಳಿಯ ಬಾಡಿಗೆ ಮನೆಗೆ ಬಂದಿದ್ದು, ಆತನಿಗೆ ಜುಲೈ 13 ರವರೆಗೆ ಹೋಂ ಕ್ವಾರಂಟೈನ್ ನೀಡಲಾಗಿತ್ತು.
ಆದರೆ ಆತ ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ, ಉಡುಪಿಯ ಹೋಟೆಲ್‌ಗಳಿಗೆ ತಿರುಗಾಡುತ್ತಿರುವ ಬಗ್ಗೆ 163 ಬಾರಿ ಹೊರಗೆ ಬಂದ ಬಗ್ಗೆ ಮೊಬೈಲ್ ಜಿಪಿಎಸ್ ಟ್ರ್ಯಾಕರ್‌ನಿಂದ ತಿಳಿದು ಬಂದಿದೆ.
ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್.ಜಿ. ಭಟ್ ಅವರು ಕುಂದಾಪುರ ಠಾಣೆಗೆ ದೂರು ನೀಡಿದ್ದು, ಅವರ ದೂರಿನಂತೆ ಸಹಬ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 269, 270 ರಡಿ ಪ್ರಕರಣ ದಾಖಲಾಗಿದೆ.
Facebook Comments
You may like
ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಉಡುಪಿಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ
ಅತ್ತೆಯ ಸಮಾಧಾನಕ್ಕಾಗಿ ಸೊಸೆಯ ಹೆಣ ನೇಣಿಗೆ ಹಾಕಿದ ಅಧಿಕಾರಿಗಳು!
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ
ಟೈಂ ಕೀಪಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ – ಬಸ್ ವಶಕ್ಕೆ
ಸಾಸ್ತಾನ ಟೋಲ್ ವಿನಾಯಿತಿ ನೀಡಲು ಒಪ್ಪದ ನವಯುಗ ಸಂಸ್ಥೆ – ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ
You must be logged in to post a comment Login