UDUPI
ಉಡುಪಿ ಜಿಲ್ಲೆ 170 ಕೊರೊನಾ ಪ್ರಕರಣ
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಐದು ಸಾವಿರ ಸನಿಹಕ್ಕೆ ತಲುಪಿದೆ. ಇಂದಿನ 170 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 2948 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1980 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 42 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
You must be logged in to post a comment Login