Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 173 ಕೊರೊನಾ ಪ್ರಕರಣ… 4 ಸಾವು

    ಮಂಗಳೂರು ಜುಲೈ28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ನೂರರ ನಂತರವೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 173 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 173  ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 5103 ಕ್ಕೆ ಏರಿಕೆಯಾಗಿದೆ.

    ಇಂದು ಜಿಲ್ಲೆಯಲ್ಲಿ 41 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2632 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಇಂದು ಕೂಡ ಜಿಲ್ಲೆಯಲ್ಲಿ 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply