Connect with us

    KARNATAKA

    ಸತತ 17ನೇ ದಿನ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ……!!

    ಬೆಂಗಳೂರು ಜೂನ್ 23: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದ್ದು, ಸತತ 17ನೇ ದಿನವೂ ಮುಂದುವರೆದಿದ್ದು, ಇಂದು ಕ್ರಮವಾಗಿ 20 ಪೈಸೆ ಮತ್ತು 55 ಪೈಸೆ ಏರಿಕೆಯಾಗಿದೆ.


    ನಿರಂತರ ಹೆಚ್ಚಳದಿಂದ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ ಈಗ 10.01ರಷ್ಟು ಮತ್ತು ಪೆಟ್ರೋಲ್‌ ಬೆಲೆ 8.50ರಷ್ಟು ಹೆಚ್ಚಳವಾಗಿದೆ. ಸದ್ಯ ಬೆಂಗಳೂರಿನಲ್ಲಿ ಡೀಸೆಲ್‌ ಬೆಲೆ 75.59 ಮತ್ತು ಪೆಟ್ರೋಲ್‌ ಬೆಲೆ 82.32 ಕ್ಕೆ ತಲುಪಿದೆ.

    ಈಗಾಗಲೇ ಇಂಧನ ದರ ಏರಿಕೆಯಿಂದ ಸರಕು ಸಾಗಾಣಿಕೆ ವೆಚ್ಚ ಹೆಚ್ಚಳವಾಗಿ ಆಹಾರ ಪದಾರ್ಥಗಳ ಬೆಲೆ ದುಬಾರಿಯಾಗಲಿದೆ ಎಂದು ಅಂದಾಜಿಸಲಾಗುತ್ತಿದೆ. ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಬದಲಿಗೆ ಕಳೆದ 17 ದಿನಗಳಿಂದ ನಿರಂತರವಾಗಿ ಬೆಲೆಯನ್ನು ಏರಿಸುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply