LATEST NEWS
ದಕ್ಷಿಣಕನ್ನಡ ಜಿಲ್ಲೆ ದಾಖಲೆಯ 196 ಕೊರೊನಾ ಪ್ರಕರಣ – 5 ಸಾವು
ಮಂಗಳೂರು ಜುಲೈ12: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 196 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಐವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂದಿನ 196 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2230 ಕ್ಕೆ ಏರಿಕೆಯಾಗಿದೆ.
ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಲ್ಲಿ 20, 90ILI, SARI 16, ಸಂಪರ್ಕ ಪತ್ತೆಯಾಗದ 57 ಮಂದಿ, ಕತಾರ್, ದುಬೈನಿಂದ ಬಂದಿದ್ದ 10 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲೆಯಲ್ಲಿ 94 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1308 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.