Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ 150ಕ್ಕೆ ಏರಿಕೆಯಾದ ಕೊರೊನಾ ಬಲಿ

    ಮಂಗಳೂರು ಜುಲೈ30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ನೂರರ ನಂತರವೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 198 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 198  ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 5509 ಕ್ಕೆ ಏರಿಕೆಯಾಗಿದೆ.

    ಇಂದು ಜಿಲ್ಲೆಯಲ್ಲಿ 105 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2800 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 150 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 27 , ILI – 80, SARI -14  ಹಾಗೂ ಸಂಪರ್ಕ ಪತ್ತೆಯಾಗದ 73 ಪ್ರಕರಣಗಳಿವೆ.

    Share Information
    Advertisement
    Click to comment

    You must be logged in to post a comment Login

    Leave a Reply