LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪ್ರಕರಣ ದೃಢ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪ್ರಕರಣ ದೃಢ
ಮಂಗಳೂರು ಎಪ್ರಿಲ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಪ್ರಕರಣ ಹೆಚ್ಚಾಗಾತ್ತಲೆ ಇದ್ದು, ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆದಿದ್ದ 80 ವರ್ಷದ ತಾಯಿ ಮತ್ತು ಅವರನ್ನು ನೋಡಿಕೊಳ್ಳುತ್ತಿದ್ದ 45 ವರ್ಷದ ಮಗನಲ್ಲಿ ಪತ್ತೆಯಾದ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇಬ್ಬರು ಶಕ್ತಿನಗರದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಶಕ್ತಿನಗರದ ಅವರ ಮನೆಯ ಸುತ್ತ ಮುತ್ತ ಸೀಲ್ ಡೌನ್ ಮಾಡಲಾಗಿದೆ.
ಈ ಮೂಲಕ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ21 ಕ್ಕೆ ಏರಿಕೆಯಾಗಿದೆ. ಈಗಾಗಲೇ 12 ಮಂದಿ ಗುಣಮುಖರಾಗಿದ್ದು, 2 ಮಂದಿ ಮೃತಪಟ್ಟಿದ್ದಾರೆ.7 ಮಂದಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಪ್ರಿಲ್ 21ರಂದೇ ಫಸ್ಟ್ ನ್ಯೂರೋ ಆಸ್ಪತ್ರೆಯನ್ನು ಸಂಪೂರ್ಣ ಸೀಲ್ ಡೌನ್ ಆಗಿದ್ದು, ಆಸ್ಪತ್ರೆಯ 190 ಸಿಬ್ಬಂದಿ ಸಹಿತ 200 ಕ್ಕೂ ಅಧಿಕ ಜನರ ತಪಾಸಣೆ ನಡೆಸಲಾಗಿದ್ದು, ಸದ್ಯ ಎಲ್ಲರೂ ಕ್ವಾರೆಂಟೈನ್ ನಲ್ಲಿದ್ದು, ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.
