15ನೇ ರಾಷ್ಟ್ರೀಯ ಐಸ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಫ್ ನಲ್ಲಿ 2 ಬೆಳ್ಳಿ ಪದಕ ಗೆದ್ದ ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ

ಮಂಗಳೂರು ನವೆಂಬರ್ 20: ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ನವೆಂಬರ್ 17 ಹಾಗೂ18 ರಂದು ದೆಹಲಿಯಲ್ಲಿ ಆಯೋಜಿಸಿದ 15 ನೇ ರಾಷ್ಟ್ರೀಯ ಐಸ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಫ್ ನಲ್ಲಿ 13 ವರ್ಷದೊಳಗಿನ ವಿಭಾಗದಲ್ಲಿ ಮಂಗಳೂರಿನ ಮಾಲೆಮಾರ್ ನಿವಾಸಿ ಫ್ರಾನ್ಸಿಸ್ ಹಾಗೂ ಡೋರಿಸ್ ದಂಪತಿಗಳ ಪುತ್ರಿ ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಎರಡು ಬೆಳ್ಳಿ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಡ್ಯಾಷೆಲ್ ಅವರು ಮಂಗಳೂರಿನ ನೀರುಮಾರ್ಗದ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿದ್ದಾರೆ.

Facebook Comments

comments