LATEST NEWS
ಕಾಂತಾರ ಎಫೆಕ್ಟ್ : 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಮಾಸಾಶನ
ಮಂಗಳೂರು ಅಕ್ಟೋಬರ್ 20: ದೈವ ನರ್ತನ ಮಾಡುವರಿಗೆ ಮಾಸಾಶನ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅಧಿಕೃತ ಘೋಷಣೆ ಮಾಡಿದ್ದಾರೆ.
ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ಶುಭಸುದ್ದಿ ನೀಡಿದೆ.
ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.