Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ 204 ಕೊರೊನಾ ಪಾಸಿಟಿವ್ ; 5 ಸಾವು

    ಮಂಗಳೂರು ಜುಲೈ31: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 204 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 204 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 5713 ಕ್ಕೆ ಏರಿಕೆಯಾಗಿದೆ.

    ಇಂದು ಜಿಲ್ಲೆಯಲ್ಲಿ 70 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2929 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 155 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 75 , ILI – 63, SARI -14  ಹಾಗೂ ಸಂಪರ್ಕ ಪತ್ತೆಯಾಗದ 52 ಪ್ರಕರಣಗಳಿವೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *