LATEST NEWS
ದಕ್ಷಿಣಕನ್ನಡ ಜಿಲ್ಲೆ 208 ಕೊರೊನಾ ಪಾಸಿಟಿವ್ 7 ಸಾವು
ಮಂಗಳೂರು ಜುಲೈ29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ನೂರರ ನಂತರವೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 208 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 208 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 5311 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 118 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2715 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 142 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 65 , ILI – 73, SARI – 12 ಹಾಗೂ ಸಂಪರ್ಕ ಪತ್ತೆಯಾಗದ 58 ಪ್ರಕರಣಗಳಿವೆ.