Connect with us

UDUPI

ಉಡುಪಿ ಜಿಲ್ಲೆಯಲ್ಲಿ ಇಂದು 21 ಮಂದಿಗೆ ಕೊರೊನಾ ಸೊಂಕು

ಉಡುಪಿ ಜೂ.14: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದ್ದು, ಇಂದು ಮತ್ತೆ 21 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1026ಕ್ಕೆ ಏರಿಕೆಯಾಗಿದೆ.


ಈಗಾಗಲೇ ಒಟ್ಟು ಸಾವಿರಕ್ಕಿಂತಲೂ ಅಧಿಕ ಕೊರೊನಾ ಸೊಂಕಿತರಿಂದಾಗಿ ಜಿಲ್ಲೆಯ ರಾಜ್ಯದ ಕೊರೊನಾ ಸೊಂಕಿತ ಜಿಲ್ಲೆಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲೇ ಇನ್ನು ಉಳಿದಿದೆ.
ಇನ್ನು ಜಿಲ್ಲೆಯಲ್ಲಿ ಕೊರೊನಾದಿಂದ ಗುಣಮುಖರಾಗುವವರ ಸಂಖ್ಯೆಯೂ ಅಧಿಕವಾಗಿದ್ದು, ಇಂದು ಕೂಡ 130 ಮಂದಿ ಕೊರೊನಾ ದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ 713 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಸೋಂಕಿನ ಕಾರಣದಿಂದ ಓರ್ವ ಸಾವನ್ನಪ್ಪಿದ್ದಾರೆ.

Facebook Comments

comments