Connect with us

LATEST NEWS

ಉಡುಪಿ ಮೂಡುಬೆಳ್ಳೆ ಯುವತಿ ಮಿಸ್ಸಿಂಗ್..!

ಉಡುಪಿ ಜಿಲ್ಲೆಯ ಕಾಪು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಎಂಬ ಯುವತಿ ಕಾಣೆಯಾಗಿದ್ದಾಳೆ.

ಉಡುಪಿ : ಉಡುಪಿ ಜಿಲ್ಲೆಯ ಕಾಪು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಎಂಬ ಯುವತಿ ಕಾಣೆಯಾಗಿದ್ದಾಳೆ.

ಅಪರಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಬಿ.ಕಾಂ. ಪದವೀಧರೆಯಾಗಿದ್ದ ಈಕೆ ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು.

ಆಕೆ ಉಪಯೋಗಿಸುತ್ತಿದ್ದ ಮೊಬೈಲ್‌ ಕರೆ ಮಾಡಿದಾಗ ಸ್ವಿಚ್‌ ಆಫ್‌ ಆಗಿದ್ದು,ಆಕೆಯ ಸ್ನೇಹಿತರಲ್ಲಿ,ಸಂಬಂಧಿಕರ ಮನೆಯಲ್ಲಿ, ಆಸುಪಾಸಿನಲ್ಲಿ ಹುಡುಕಾಡಿದ್ದು, ಈ ತನಕ ಪತ್ತೆಯಾಗಿರುವುದಿಲ್ಲ ಎಂದು ಎಂದು ಸಹೋದರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *