Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆ ಇಂದು 7 ಸಾವು , 229 ಕೊರೊನಾ ಪಾಸಿಟಿವ್

ಮಂಗಳೂರು ಅಗಸ್ಟ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8878 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 128 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2164 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೂಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 269 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -122, ಬಂಟ್ವಾಳ – 36, ಸುಳ್ಯ -1, ಬೆಳ್ತಂಗಡಿ – 8, ಪುತ್ತೂರು – 31, ಹೊರ ಜಿಲ್ಲೆಯವರು – 31 ಪ್ರಕರಣಗಳಿವೆ.

Facebook Comments

comments