Connect with us

LATEST NEWS

ದಕ್ಷಿಣಕನ್ನಡದಲ್ಲಿ 237 ಕೊರೊನಾ ಪ್ರಕರಣ; 4 ಸಾವು

ಮಂಗಳೂರು ಜುಲೈ18: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 3 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 237 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 4 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಇಂದಿನ 237 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3311 ಕ್ಕೆ ಏರಿಕೆಯಾಗಿದೆ.


ಇಂದು ಜಿಲ್ಲೆಯಲ್ಲಿ 109 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1848 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 4 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 75 ಕ್ಕೆ ಏರಿಕೆಯಾಗಿದೆ.

Facebook Comments

comments