LATEST NEWS
ಉಡುಪಿ ಜಿಲ್ಲೆ 237 ಕೊರೊನಾ ಪ್ರಕರಣ ದಾಖಲು
ಉಡುಪಿ ಅಗಸ್ಟ್ 16: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 237 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7975 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5361 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2537 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1398 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1139 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 77 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 122, ಕುಂದಾಪುರ -100 , ಕಾರ್ಕಳ -14, ಜಿಲ್ಲೆಯ ಹೊರಗಿನ – 1 ಪ್ರಕರಣಗಳಿವೆ.