Connect with us

    LATEST NEWS

    ದಕ್ಷಿಣಕನ್ನಡದಲ್ಲಿ ಇಂದು 238 ಕೊರೊನಾ ಪ್ರಕರಣ…6 ಸಾವು

    ಮಂಗಳೂರು ಜುಲೈ16: ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಪ್ರಕರಣ ದ್ವಿಶತಕ ಭಾರಿಸಿದೆ.ಇಂದು ಒಂದೇ ದಿನ 238 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಆರು ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಇಂದಿನ 238 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2763 ಕ್ಕೆ ಏರಿಕೆಯಾಗಿದೆ.

    ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಲ್ಲಿ 23, 106 ILI, SARI 17, ಸಂಪರ್ಕ ಪತ್ತೆಯಾಗದ 73 ಮಂದಿ, ಅಂತರಾಷ್ಟ್ರೀಯ ಟ್ರಾವೆಲ್ ಹಿಸ್ಟರಿಯಿಂದ 19 ಮಂದಿಗೆ ಸೋಂಕು ತಗುಲಿದೆ. ಇಂದು ಜಿಲ್ಲೆಯಲ್ಲಿ 74 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1537 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 6 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply