Connect with us

UDUPI

ಉಡುಪಿ ಜಿಲ್ಲೆ 245 ಕೊರೊನಾ ಪಾಸಿಟಿವ್ – 5 ಸಾವು

ಉಡುಪಿ ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 245 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 5605 ಕ್ಕೆ ಏರಿಕೆಯಾಗಿದೆ. ಇಂದು 5 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.


ಉಡುಪಿ ಜಿಲ್ಲೆಯಲ್ಲಿ ಒಟ್ಟು 3258 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2292 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಉಡುಪಿಯಲ್ಲಿ 5 ಮಂದಿ ಕೊರೊನೊದಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 55 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 125, ಕುಂದಾಪುರ – 92 , ಕಾರ್ಕಳ – 25, ಜಿಲ್ಲೆಯ ಹೊರಗಿನ – 4 ಪ್ರಕರಣ.

 

Facebook Comments

comments